ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಯೋಧರು ಜೈಷ್ ಎ ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯ ಕಂಗನ್ ಏರಿಯಾದಲ್ಲಿ ಉಗ್ರರು ಅಡಗಿರುವ ಮಾಹಿತಿಯನ್ನು ತಿಳಿದು ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಭಯೋತ್ಪಾದಕರು ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ಚಕಮಕಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದು, ಕಾರ್ಯಾಚರಣೆ ಮುಂದುವರೆಸಿದ್ದಾರೆ.










