ಪುಲ್ವಾಮಾದಲ್ಲಿ ಎನ್‍ಕೌಂಟರ್-ಇಬ್ಬರು ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ…

154
firstsuddi

ಶ್ರೀನಗರ : ಜಮ್ಮು ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ. ಪುಲ್ವಾಮಾ ಜಿಲ್ಲೆಯ ಬಾಂಡ್‍ಜೊ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂದು ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿಯನ್ನು ತಿಳಿದ ಸಿ.ಆರ್.ಪಿ.ಎಫ್ ಸಿಬ್ಬಂದಿ, ಸ್ಥಳೀಯ ಪೊಲೀಸರು ಹಾಗೂ ರಾಷ್ಟ್ರೀಯ ರೈಫಲ್ಸ್ ಸೇರಿದಂತೆ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿ ನದೆದಿದ್ದು, ದಾಳಿಯಲ್ಲಿ ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಹಾಗೂ ಭಾರತೀಯ ಸೇನೆ ಓರ್ವ ಯೋಧ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದು, ಉಗ್ರರಿಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.