ಪುಲ್ವಾಮಾದಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಎರಡು ಅಡಗುದಾಣವನ್ನು ಧ್ವಂಸಗೊಳಿಸಿದ ಸೇನೆ…

136
firstsuddi

ಶ್ರೀನಗರ : ಭಾರತೀಯ ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಸೇರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉಗ್ರರ ಎರಡು ಅಡಗುದಾಣಗಳನ್ನು ಧ್ವಂಸಗೊಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯ ಆವಂತಿಪೊರಾ ಬಳಿ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ತಿಳಿದ ಭದ್ರತಾ ಪಡೆಗಳು ಹಾಗೂ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆ ವೇಳೆ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಎರಡು ಅಡಗುದಾಣವನ್ನು ನಾಶಪಡಿಸಿದ್ದು, ಸಾವಿರಕ್ಕೂ ಹೆಚ್ಚು ಮದ್ದು ಗುಂಡುಗಳು ಹಾಗೂ ಗ್ರೆನೇಡ್‍ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.