ಪುಲ್ವಾಮಾ ದಾಳಿಗೆ 3 ವರ್ಷ – ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ಮೋದಿ.

67
firstsuddi

ನವದೆಹಲಿ : ಮೂರು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಮನ ಸಲ್ಲಿಸಿದರು.

2019ರ ಈ ದಿನದಂದು ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಾನು ನಮನ ಸಲ್ಲಿಸುತ್ತೇನೆ. ಅವರ ಶೌರ್ಯ ಮತ್ತು ತ್ಯಾಗ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬ ಭಾರತೀಯನಿಗೂ ಇದು ಪ್ರೇರಕ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಫೆಬ್ರವರಿ 14, 2019 ರಂದು ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನ ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್ ಸಿಆರ್​ಪಿಎಫ್​ ಬೆಂಗಾವಲು ಪಡೆಗೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿದ್ದ. ಈ ದಾಳಿಯಲ್ಲಿ 40 ಸಿಆರ್​ಪಿಎಫ್​ ಯೋಧರು ಹುತಾತ್ಮರಾಗಿದ್ದರು.