ಪುಲ್ವಾಮ ದಾಳಿಗೆ ಒಂದು ವರ್ಷ-ಟ್ವೀಟ್ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…

164
firstsuddi

ನವದೆಹಲಿ : ಇಂದಿಗೆ ಪುಲ್ವಾಮ ದಾಳಿಯಾಗಿ ಒಂದು ವರ್ಷವಾಗಿದ್ದು, ಇದರ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಮೂಲಕ ಹುತಾತ್ಮ ಯೋಧರಿಗೆ ಗೌರವವನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಪುಲ್ವಾಮ ದಾಳಿಯಲ್ಲಿ ಮೃತಪಟ್ಟ ಧೈರ್ಯಶಾಲಿ ಹುತಾತ್ಮ ಯೋಧರಿಗೆ ನನ್ನ ಗೌರವ. ನಮ್ಮ ರಾಷ್ಟ್ರದ ಸೇವೆ ಮತ್ತು ರಕ್ಷಣೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳ ಹುತಾತ್ಮತೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಹುತಾತ್ಮ ಯೋಧರಿಗೆ ಗೌರವವನ್ನು ಸಲ್ಲಿಸಿದ್ದಾರೆ.