ಪೆಗಾಸಸ್ ಗೂಢಚಾರಿಕೆ ಪ್ರಕರಣ : ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ…

90
firstsuddi

ನವದೆಹಲಿ : ಪೆಗಾಸಸ್ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ತಜ್ಞರ ಸಮಿತಿ ರಚಿಸಿದೆ.

ಮೂವರು ತಜ್ಞರ ಸಮಿತಿಯನ್ನು ಸುಪ್ರೀಂಕೋರ್ಟ್ ರಚಿಸಿದ್ದು, ಪೆಗಾಸಸ್ ತನಿಖಾ ಸಮಿತಿಯ ಮುಖ್ಯಸ್ಥರಾಗಿ ಮಾಜಿ ನ್ಯಾಯಮೂರ್ತಿ ಆರ್. ವಿ. ರವೀಂದ್ರನ್ ಅವರನ್ನು ಸುಪ್ರೀಂ ಕೋರ್ಟ್ ನೇಮಿಸಿದ್ದು, ಸಮಿತಿಯ ಇತರೆ ಸದಸ್ಯರಾಗಿ ಅಲೋಕ್ ಜೋಶಿ ಮತ್ತು ಸಂದೀಪ್ ಒಬೆರಾಯ್ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯುತ್ತದೆ. ಇದರಿಂದ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಸುದೀರ್ಘ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಇಂದು ಮಹತ್ವದ ಆದೇಶ ನೀಡಿದ್ದು, ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ, 8 ವಾರಗಳ ನಂತರ ನ್ಯಾಯಾಲಯದ ಮುಂದೆ ವರದಿ ಸಲ್ಲಿಸಬೇಕೆಂದು ತನಿಖಾ ಸಮಿತಿಗೆ ಸೂಚನೆ ನೀಡಲಾಗಿದೆ.