ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 2 ರೂಪಾಯಿ ಇಳಿಕೆ…

39
firstsuddi

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್​ಗೆ ಎರಡು ರೂಪಾಯಿ ಕಡಿಮೆಯಾಗಿದೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಮುನ್ನವೇ ಈ ಬೆಳವಣಿಗೆ ನಡೆದಿದೆ.

ಪೆಟ್ರೋಲ್ ಮತ್ತು ಡೀಸೆಲ್​ನ ಪರಿಷ್ಕೃತ ಬೆಲೆಯು ಇಂದು ಬೆಳಗ್ಗೆ 6 ಗಂಟೆಯಿಂದ ಅನ್ವಯವಾಗಲಿದೆ ಎಂದು ತೈಲ ಸಚಿವಾಲಯ ನಿನ್ನೆ ಸಂಜೆ ತಿಳಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಈಗ ಲೀಟರ್​ಗೆ 96.72 ರೂ.ಗೆ ಇದೆ. ಹೊಸ ದರ 94.72 ರೂ.ಗಳಾಗಿದ್ದು, ಡೀಸೆಲ್ ಬೆಲೆ ಪ್ರಸ್ತುತ 89.62 ರೂ. ಇದ್ದು, ಹೊಸ ದರ 87.62 ರೂ. ಆಗಲಿದೆ.

ಸಾರ್ವತ್ರಿಕ ಚುನಾವಣೆಗೆ ದಿನಾಂಕ ಮುನ್ನವೇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆಯಲ್ಲಿ ಸುಮಾರು ಎರಡು ವರ್ಷಗಳ ನಂತರ ತಮ್ಮ ಬಿಗಿಪಟ್ಟನ್ನು ಸಡಿಲಿಕೆ ಮಾಡಿವೆ.