ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಾಳೆ ರಾಜ್ಯಾದ್ಯಂತ ಲಾರಿ ಸಂಚಾರ ಬಂದ್ : ಷಣ್ಮುಗಪ್ಪ.

185
Firstsuddi

ಬೆಂಗಳೂರು : ರಾಜ್ಯಾದ್ಯಂತ ನಾಳೆ ಲಾರಿ ಮುಷ್ಕರ ನಡೆಯಲಿದ್ದು, ಇಂಧನ ದರ ಏರಿಕೆ, ಜಿಎಸ್ ಟಿ, ಇ-ವೇ ಬಿಲ್ ವಿರೋಧಿಸಿ ಲಾರಿ ಸಂಚಾರ ಬಂದ್ ಆಗಲಿದೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಅವರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೂ ಲಾರಿ ಸಂಚಾರ ಬಂದ್ ಆಗಲಿದ್ದು, ನಾಳೆ ಬೆಳಗ್ಗೆಯಿಂದ ಸಂಜೆವರೆಗೂ ಲಾರಿ ಸಂಚಾರ ಇರುವುದಿಲ್ಲ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಒಂದು ದಿನ ಸಾಂಕೇತಿಕ ಮುಷ್ಕರ ನಡೆಸಲು ತೀರ್ಮಾನಿಸಲಾಗಿದ್ದು, ಕೂಡಲೇ ಸರ್ಕಾರ ಮಾತುಕತೆಗೆ ಕರೆಯಬೇಕೆಂದು ಆಗ್ರಹ ವ್ಯಕ್ತಪಡಿಸಿದರು. ಸರ್ಕಾರ ಮಾತುಕತೆ ನಡೆಸದಿದ್ದರೆ, ಮಾರ್ಚ್ 15 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗುವುದು ಎಂದು ತಿಳಿಸಿದ್ದಾರೆ.