ಪೇಂಟ್ ಮಿಕ್ಸರ್​ಗೆ ಕೂದಲು ಸಿಲುಕಿ ಮಹಿಳೆ ಸಾವು…

65
firstsuddi

ಬೆಂಗಳೂರು: ಬಣ್ಣ ಬೆರೆಸುವ ಪೇಂಟ್ ಮಿಕ್ಸರ್​ಗೆ ಕೂದಲು ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ನಗರದ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ.

ಶ್ವೇತಾ (34) ಮೃತಪಟ್ಟ ಮಹಿಳೆ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಶ್ವೇತಾ, ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಕೆಲಸ ಮಾಡುವ ವೇಳೆ ಬಣ್ಣ ಗಟ್ಟಿಯಾಗುತ್ತಿದ್ದರಿಂದ ಚೆಕ್ ಮಾಡಲು ಗ್ರೈಂಡರ್ ಒಳಗೆ ಬಗ್ಗಿದಾಗ ಮಹಿಳೆಯ ಜಡೆ ಸಿಲುಕಿದೆ. ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಸಹ ಗ್ರೈಂಡರ್ ಸೌಂಡ್ ಗೆ ಯಾರಿಗೂ ಕೇಳಿಸಿಲ್ಲ. ಬಳಿಕ ಉಳಿದ ಕೆಲಸಗಾರರು ಮಿಕ್ಸರ್ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.