ಶಿವಮೊಗ್ಗ: ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದರಿಂದ ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಜುನಾಥ್ (23) ಆತ್ಮಹತ್ಯೆ ಮಾಡಿಕೊಂಡ ದಿನಗೂಲಿ ಕಾರ್ಮಿಕ. ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದರಿಂದ ಮನನೊಂದು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಅವರ ಸಾವಿಗೆ ಪೊಲೀಸರೇ ಕಾರಣ ಎಂದು ಮೃತ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ.
ಇದೀಗ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದ ಇಬ್ಬರು ಪೊಲೀಸರ ವಿರುದ್ಧ ಅವರ ಪತ್ನಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.










