ಶ್ರೀನಗರ : ಇಂದು ಬೆಳ್ಳಂಬೆಳಗ್ಗೆ ಉಗ್ರರು ನಡೆಸಿದ ಗುಂಡಿನ ದಾಳಿಗೆ ಜಮ್ಮು ಕಾಶ್ಮೀರಾದ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ನಗರದಿಂದ ಹೊರವಲಯದಲ್ಲಿ ಇರುವ ನೌಗಂನ ಬೈಪಾಸ್ ಬಳಿ ಉಗ್ರರು ಪೊಲೀಸರ ಗುಂಪಿನ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ಪೊಲೀಸರು ಗಂಭೀರ ಗಾಯಗೊಂಡಿದ್ದರು. ಗಾಯಗೊಂಡ ಪೊಲೀಸರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಇಬ್ಬರು ಪೊಲೀಸರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದು, ದಾಳಿ ನಡೆದ ಸ್ಥಳವನ್ನು ಸುತ್ತುವರೆದು ಉಗ್ರರಿಗಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.










