ಪೊಲೀಸರ ಮೇಲೆ ಹಲ್ಲೆ ; ಉದ್ಯಮಿ ಕೊಲೆ ಆರೋಪಿ ಕಾಲಿಗೆ ಗುಂಡೇಟು…

73
firstsuddi

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ ರಸ್ತೆಯಲ್ಲಿ ಕಳೆದ ಮೂರು ತಿಂಗಳ ಹಿಂದೆ (ಮಾರ್ಚ್ 15ರಂದು) ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನ್ನವರ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈಗಾಗಲೇ ರಾಜು ಕೊಲೆಯಲ್ಲಿ ನಾಲ್ಕೈದು ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಮಾರ್ಕೆಟ್ ಎಸಿಪಿ ನಾರಾಯಣ ಭರಮನಿ ನೇತೃತ್ವದ ಪೊಲೀಸ್ ಸಿಬ್ಬಂದಿಯು ಇಂದು ಬೆಳಗಿನ ಜಾವ ಕೊಲೆ ಆರೋಪಿ ವಿಶಾಲ್ ಸಿಂಗ್ ಚೌಹಾಣ್ ಎಂಬುವವರನ್ನ ಬೆಳಗಾವಿಯ ವೀರಭದ್ರೇಶ್ವರ ನಗರದ ಕೋಯ್ಲಾ ಹೋಟೆಲ್ ಬಳಿ ಹಿಡಿಯಲು ಹೋಗಿತ್ತು. ಈ ವೇಳೆ ಎಸಿಪಿ ಮತ್ತವರ ತಂಡದ ಮೇಲೆ ಮಾರಕಾಸ್ತ್ರಗಳಿಂದ ಆರೋಪಿ ಹಲ್ಲೆಗೆ ಮುಂದಾಗಿದ್ದಾನೆ. ಆಗ ಎಸಿಪಿ ನಾರಾಯಣ ಭರಮನಿ ಎರಡು ಸುತ್ತು ಫೈರಿಂಗ್ ಮಾಡಿದ್ದಾರೆ. ಪರಿಣಾಮ ವಿಶಾಲ್ ಸಿಂಗ್ ಕಾಲಿಗೆ ಗುಂಡು ತಗುಲಿದ್ದು, ಸದ್ಯ ಆರೋಪಿಯನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.