ಪೊಲೀಸರ ವಶದಲ್ಲಿದ್ದ ಆರೋಪಿ ಸಾವು – ಪೊಲೀಸರೇ ಚಿತ್ರಹಿಂಸೆ ನೀಡಿ ಕೊಂದಿದ್ದಾರೆಂದು ಮೃತನ ಪುತ್ರಿ ಆರೋಪ…

76
firstsuddi

ಬೆಳಗಾವಿ: ಗಾಂಜಾ ಪ್ರಕರಣದಲ್ಲಿ ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ್ (45) ಸಾವನ್ನಪ್ಪಿದ ಆರೋಪಿ.

ನಿನ್ನೆ ಸಂಜೆ ಗಾಂಜಾ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಪೊಲೀಸರು ಬಸನಗೌಡ ಈರನಗೌಡ ಪಾಟೀಲ್ ನನ್ನು ಬಂಧಿಸಿ ಕರೆತರುವಾಗ ಕಾಕತಿ ಗ್ರಾಮದ ಮಾರ್ಗಮಧ್ಯೆಯೇ ಆತನ ಆರೋಗ್ಯ ಹದಗೆಟ್ಟಿದೆ. ಈ ವೇಳೆ ಪೊಲೀಸರು ಪ್ರಾಥಮಿಕ ಚಿಕಿತ್ಸೆ ನೀಡಿ ಆತನ ಆರೋಗ್ಯ ಸುಧಾರಿಸಿದ ನಂತರ ಠಾಣೆಗೆ ಕರೆತಂದು ಮತ್ತೆ ವಿಚಾರಣೆಗೆ ಒಳಪಡಿಸುವ ಸಮಯದಲ್ಲಿ ಆರೋಪಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ.

ಬಳಿಕ ಆರೋಪಿಯನ್ನು ಬೀಮ್ಸ್ ಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಆರೋಪಿ ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾರೆ. ಸದ್ಯ ಪ್ರಕರಣವನ್ನು ಕಮಿಷನರ್ ಡಾ.ಎಂ.ಬಿ.ಬೋರಲಿಂಗಯ್ಯ ಸಿಐಡಿ ತನಿಖೆಗೆ ಶಿಫಾರಸು ಮಾಡಿದ್ದಾರೆ.

ನಮ್ಮ ತಂದೆಗೆ ಬಿಪಿ, ಶುಗರ್ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಪೊಲೀಸರೇ ಸುಳ್ಳು ಕೇಸ್ ದಾಖಲಿಸಿದ್ದಾರೆ. ತಂದೆಯ ಕೈಗೆ ಹಗ್ಗಕಟ್ಟಿ, ಚಿತ್ರಹಿಂಸೆ ನೀಡಿದ್ದಾರೆ. ಆದ್ದರಿಂದಲೆ ತಂದೆ ಠಾಣೆಯಲ್ಲಿ ಮೃತಪಟ್ಟಿದ್ದಾರೆ ಎಂದು ಬಸನಗೌಡ ಪಾಟೀಲ್ ಪುತ್ರಿ ರೋಹಿಣಿ ಪಾಟೀಲ್ ಗಂಭೀರ ಆರೋಪ ಮಾಡಿದ್ದು, ನಮಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.