ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಕೊರೊನಾ…

75
firstsuddi

ಬೆಂಗಳೂರು : ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆಯುಕ್ತರು ಆರ್ ಟಿಸಿಪಿಆರ್ ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ದೃಢವಾಗಿದೆ. ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರು ಸದ್ಯ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಪೊಲೀಸ್ ಸಿಬ್ಬಂದಿಯಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಸಿಬ್ಬಂದಿಗೆ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಲು ಕಮಲ್ ಪಂತ್ ಸೂಚನೆ ನೀಡಿದ್ದಾರೆ. ಜೊತೆಗೆ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಠಾಣೆ ಬಿಟ್ಟು ಹೊರಗೆ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿ ಟೆಸ್ಟ್ ಹೆಚ್ಚಳ ಮಾಡುವಂತೆ ಅವರು ಸಲಹೆ ನೀಡಿದ್ದಾರೆ.