ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆಗೆ ಶರಣು…

56
firstsuddi

ಮೈಸೂರು : ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ನಡೆದಿದೆ.

ಪರಸಪ್ಪ ಕೊನ್ನೂರು(27) ನೇಣಿಗೆ ಶರಣಾದ ಕಾನ್ಸ್ ಟೇಬಲ್. ಪರಸಪ್ಪ, ಒಂದೂವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2016ನೇ ಬ್ಯಾಚ್ ನಲ್ಲಿ ಆಯ್ಕೆಯಾಗಿದ್ದ ಪರಸಪ್ಪ, ಮೈಸೂರಿನ ದೇವರಾಜ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಜರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.