ಪೊಲೀಸ್ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣ – ಆರು ಮಂದಿಯ ಬಂಧನ…

133
firstsuddi

ಮಂಗಳೂರು : ನಗರದ ಪೊಲೀಸ್ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹಲವಾರು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಗೆ ಪ್ರತೀಕಾರ ತೀರಿಸಲು ಸಂಚು ರೂಪಿಸಿದ್ದ ಆರು ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಹಮ್ಮದ್ ನವಾಝ್, ಅನೀಶ್ ಅಶ್ರಫ್, ಅಬ್ದುಲ್ ಖಾದರ್ ಫಹಾದ್, ಶೇಖ್ ಮಹಮ್ಮದ್ ಹ್ಯಾರಿಸ್, ರಾಹಿಲ್ ಯಾನೆ ಚೋಟು ರಾಹಿಲ್, ಮಹಮ್ಮದ್ ಖಾಯೀಸ್ ಎಂದು ಗುರುತಿಸಲಾಗಿದೆ.

ಕಳೆದ ಡಿ.16 ರಂದು ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಗಣೇಶ್ ಕಾಮತ್ ಎಂಬವರ ಮೇಲೆ ಕೊಲೆ ಯತ್ನ ನಡೆದಿತ್ತು. ಈ ಪ್ರಕರಣದ ಬೆನ್ನುಹತ್ತಿದ ಪೊಲೀಸರು ಹಲವಾರು ಆಘಾತಕಾರಿ ವಿಚಾರಗಳನ್ನು ಪತ್ತೆ ಹಚ್ಚಿದ್ದಾರೆ.