ಚಿತ್ರದುರ್ಗ : 2ನೇ ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶ್ರೀಗಳನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಆದೇಶ ಹೊರಡಿಸಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಡಾ. ಶಿವಮೂರ್ತಿ ಮುರುಘಾ ಶರಣರು, ಎ2 ಆರೋಪಿ ಮಹಿಳಾ ವಾರ್ಡನ್ ಹಾಗೂ ಎ3 ಆರೋಪಿ ಪರಮಶಿವಯ್ಯ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನ.8ರವರೆಗೂ ವಿಸ್ತರಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.
ನವೆಂಬರ್ 5ರವರೆಗೆ ಮುರುಘಾ ಶರಣರು ಪೊಲೀಸ್ ಕಸ್ಟಡಿಯಲ್ಲಿರಲಿದ್ದು, ಚಿತ್ರದುರ್ಗದ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು, ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ಮಾಡಲಿದ್ದಾರೆ.










