ಪೋಷಕರು ಮದುವೆ ನಿಶ್ಚಯ ಮಾಡಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ…

234

ಹೈದರಾಬಾದ್ : ಪೋಷಕರು ಮದುವೆ ನಿಶ್ಚಯ ಮಾಡಿದರು ಎಂದು ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀಕಾಕುಲಂನಲ್ಲಿ ನಡೆದಿದೆ. ಭಾರತಿ(19) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದ್ದು, ಎರಡನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಭಾರತಿ ಅವರು ನಾನು ನನ್ನ ಪದವಿಯನ್ನು ಪೂರ್ಣಗೊಳಿಸಬೇಕು. ಅಲ್ಲಿಯವರೆಗೂ ಮದುವೆಯನ್ನು ಮುಂದೂಡುವಂತೆ ತನ್ನ ಪೋಷಕರ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ಪೋಷಕರು ಭಾರತಿ ಅವರ ಮನವಿಯನ್ನು ತಿರಸ್ಕರಿಸಿ ನಿಶ್ಚಯ ಮಾಡಿದ್ದು, ಇದರಿಂದ ಮನನೊಂದ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ಭಾರತಿ ಅವರ ಸಹೋದರಿ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಸಹೋದರಿ ಕೂಡಲೇ ಅಕ್ಕಪಕ್ಕದವರಿಗೆ ತಿಳಿಸಿ ಸ್ಥಳಿಯರ ಸಹಾಯದಿಂದ ಸೋಮಪೇಟಾ ಸಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಅಲ್ಲಿಂದ ಬೇರೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಯುವತಿ ಮೃತಪಟ್ಟಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡ ಸ್ಥಳಿಯ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.