ಶ್ರೀನಗರ : ಜಮ್ಮು-ಕಾಶ್ಮೀರದ ಕುಲ್ಗಾಂನ ಹಡಿಗಾಂ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಪೋಷಕರ ಮನವಿಯ ಮೇರೆಗೆ ಶರಣಾಗಿದ್ದಾರೆ.
ಭದ್ರತಾ ಪಡೆಗಳು ಉಗ್ರರ ಅಡಗುತಾಣದ ಮೇಲೆ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಇಬ್ಬರು ಉಗ್ರರ ಪೋಷಕರನ್ನು ಭದ್ರತಾ ಪಡೆಗಳು ಕರೆ ತಂದಿದ್ದರು. ಪೋಷಕರು ತಮ್ಮ ಮಕ್ಕಳೊಂದಿಗೆ ಮಾತನಾಡಿ ಶರಣಾಗುವಂತೆ ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಆ ಇಬ್ಬರು ಉಗ್ರರು ಶರಣಾಗಿದ್ದಾರೆ. ಈ ವೇಳೆ ಅವರ ಬಳಿಯ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಇಬ್ಬರು ಸ್ಥಳೀಯರಾಗಿದ್ದಾರೆ. ಅಷ್ಟೇ ಅಲ್ಲದೇ ಇತ್ತೀಚೆಗೆ ಭಯೋತ್ಪಾದಕ ಗುಂಪಿಗೆ ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.










