ಪ್ರಚಾರದ ಗೀಳಿಗೆ ಬಿದ್ದಾಗ ಅಸಂಬದ್ಧ ಮಾತು ಬರುತ್ತದೆ : ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಕಿಡಿ…

80
firstsuddi

ಮೈಸೂರು : ನಾದ ಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ವಿರುದ್ಧದ ಹೇಳಿಕೆ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರತಾಪ್ ಸಿಂಹ ಜನಾಭಿಪ್ರಾಯದ ವಿರುದ್ಧ ಮಾತಾನಾಡಿ ನಂತರ ಕ್ಷಮೆಯಾಚಿಸುವ ಛಾಳಿ ಹೆಚ್ಚಾಗಿದೆ. ಹಂಸಲೇಖ ಅವರು ಪರಿಜ್ಞಾನದಿಂದ ಪೇಜಾವರರ ಶ್ರೀಗಳ ಬಗ್ಗೆ ಮಾತಾಡಬೇಕಿತ್ತು ಎಂದು ಗರಂ ಆದರು.

ಪೇಜಾವರ ಶ್ರೀಗಳು ಬೇರೆ ರೀತಿಯ ಸ್ವಾಮೀಜಿಗಳಂತಲ್ಲ. ಕರ್ಮಠ ವ್ಯವಸ್ಥೆಯನ್ನು ಮೀರಿ ಸಮಾನತೆ ಸಾರಿದವರು ಪೇಜಾವರ ಶ್ರೀ. ಸಾಧು ಸಂತರ ಆಹಾರ ಪದ್ಧತಿ ಸಸ್ಯಹಾರ. ಮನಸ್ಸಿನ ತಾರತಮ್ಯ ತೆಗೆದು ಹಾಕಲು ಶ್ರೀಗಳು ಹೋಗಿದ್ದರೇ ಹೊರತು ಆಹಾರ ಪದ್ಧತಿಯ ಸಮಾನತೆಗೆ ಅಲ್ಲ. ಪ್ರಗತಿಪರ ಅನ್ನಿಸಿಕೊಳ್ಳುವ ಗೀಳಿಗೆ ಬಿದ್ದು, ಪ್ರಚಾರಕ್ಕಾಗಿ ಹೀಗೆ ಮಾತಾಡುತ್ತಿದ್ದಾರೆ. ಹಂಸಲೇಖ ಅವರು ಬಾಯಿ ತಪ್ಪಿನಿಂದ ಈ ರೀತಿ ಹೇಳಿದ್ದಾರೆ ಎಂದು ಅನ್ನಿಸುವುದಿಲ್ಲ. ಪ್ರಚಾರದ ಗೀಳಿಗೆ ಬಿದ್ದಾಗ ಅಸಂಬದ್ಧ ಮಾತು ಬರುತ್ತದೆ ಎಂದು ಕಿಡಿಕಾರಿದರು.