ಪ್ರತಿಭಟನೆ ವೇಳೆ ರೈತರು ಮೃತಪಟ್ಟಿರುವ ಬಗ್ಗೆ ದಾಖಲೆಗಳಿಲ್ಲ, ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ : ಕೇಂದ್ರ ಕೃಷಿ ಸಚಿವ.

56
firstsuddi

ನವದೆಹಲಿ : ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಹಲವರು ರೈತರು ಮೃತಪಟ್ಟಿರುವ ಬಗ್ಗೆ ನಮ್ಮ ಸರ್ಕಾರದ ಬಳಿ ಯಾವುದೇ ದಾಖಲೆಯಿಲ್ಲ, ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಂಸತ್ತಿನಲ್ಲಿ ಲಿಖಿತವಾಗಿ ಉತ್ತರ ನೀಡಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಹಲವರು ಮೃತಪಟ್ಟಿದ್ದಾರೆ. ಅಂಥವರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಏನು ಯೋಚನೆ ಮಾಡಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೃತಪಟ್ಟ ರೈತರ ಬಗ್ಗೆ ಕೃಷಿ ಇಲಾಖೆಯಲ್ಲಿ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ತತ್ಪರಿಣಾಮ ನವೆಂಬರ್ 19ರಂದು ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದರು. ಅದರಂತೆ ಸಂಸತ್ತಿನಲ್ಲಿ ಕೂಡ ಕೃಷಿ ಕಾಯ್ದೆ ರದ್ದಾಗಿದೆ. ಆದರೆ ಪ್ರತಿಭಟನೆ ವೇಳೆ ಸುಮಾರು 700 ರೈತರು ಮೃತಪಟ್ಟಿದ್ದಾರೆ, ಅವರ ಕುಟುಂಬಗಳಿಗೆ ಪರಿಹಾರ ಕೊಡಬೇಕು ಎಂದು ರೈತ ಸಂಘಟನೆಗಳು, ಪ್ರತಿಪಕ್ಷಗಳು ಒತ್ತಾಯಿಸಿದ್ದವು.