ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ; ಎಂಟನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ.

100
firstsuddi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಅಕ್ಷಯ ತೃತೀಯದ ಶುಭ ದಿನದಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.

ಇಂದು ಬೆಳಗ್ಗೆ ಪ್ರಧಾನಿ ತಮ್ಮ ಕಚೇರಿಯಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಒಟ್ಟು 19 ಸಾವಿರ ಕೋಟಿಗೂ ಅಧಿಕ ಹಣವನ್ನು ಬಿಡುಗಡೆ ಮಾಡಿದ್ದು, 9.5 ಕೋಟಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಕಾರ ರೈತರ ಖಾತೆಗಳಿಗೆ ಪ್ರತಿ ವರ್ಷ ಮೂರು ಹಂತಗಳಲ್ಲಿ 6 ಸಾವಿರ ರೂ. ಜಮೆಯಾಗುತ್ತಿದ್ದು, ಪ್ರತಿ ನಾಲ್ಕು ತಿಂಗಳಿಗೆ ಒಂದು ಸಲ 2 ಸಾವಿರ ರೂ. ವರ್ಗಾವಣೆಯಾಗುತ್ತದೆ. 2019ರ ಡಿಸೆಂಬರ್ ನಲ್ಲಿ ಜಾರಿಗೆ ಬಂದ ಈ ಯೋಜನೆಯಿಂದ ಸರ್ಕಾರಕ್ಕೆ ವರ್ಷಕ್ಕೆ 75 ಸಾವಿರ ಕೋಟಿ ರೂಪಾಯಿ ಹೊರೆಯಾಗುತ್ತಿದೆ.