ಪ್ರಧಾನಿ ಮೋದಿ ಅವರಿಗೆ 70ನೇ ಹುಟ್ಟುಹಬ್ಬ ಸಂಭ್ರಮ-ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರಿಂದ ಶುಭಾಶಯ…

165
firstsuddi

ನವದೆಹಲಿ : ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ 70ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸರ್ಕಾರದ ಸಚಿವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೇರಿದಂತೆ ಹಲವು ಗಣ್ಯರು ಮೋದಿ ಅವರಿಗೆ ಶುಭಕೋರಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ ಸದೃಡ, ಸುರಕ್ಷಿತ ಹಾಗೂ ಸ್ವಾವಲಂಬಿ ಭಾರತವನ್ನು ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜೀವನದ ಪ್ರತಿ ಕ್ಷಣವನ್ನೂ ಮೀಸಲಿರಿಸಿದ್ದಾರೆ. ಅವರ ನಾಯಕತ್ವದಲ್ಲಿ ರಾಷ್ಟ್ರ ಸೇವೆ ಮಾಡುತ್ತಿರುವ ನಾನೇ ಅದೃಷ್ಟಶಾಲಿ. ಎಲ್ಲ ದೇಶವಾಸಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರೋಗ್ಯ ದೀರ್ಘಾಯುಷ್ಯವನ್ನು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ ಲೋಕತಾಂತ್ರಿಕ ಪರಂಪರೆಯಲ್ಲಿ ನಿಷ್ಠೆ, ಆದರ್ಶವನ್ನು ಪ್ರಸುತ್ತಪಡಿಸಿದ್ದೀರಿ. ರಾಷ್ಟ್ರವು ನಿಮ್ಮ ಅಮೂಲ್ಯವಾದ ಸೇವೆಗಳನ್ನು ಪಡೆಯುತ್ತಲೇ ಇರಲಿ ಎಂದು ಶುಭಕೋರಿದ್ದಾರೆ.
ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ನರೇಂದ್ರ ಮೋದಿ ಅವರಿಗೆ ಜನ್ಮ ದಿನದ ಶುಭಾಯಶಯ ಎಂದು ಬರೆದುಕೊಂಡಿದ್ದಾರೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ಅವರು ಚುರುಕು ನಾಯಕತ್ವ, ದೃಢ ನಿರ್ಧಾರ, ನಿರ್ಣಾಯಕ ಕ್ರಮದಿಂದ ಭಾರತ ಸಾಕಷ್ಟು ಲಾಭ ಗಳಿಸಿದೆ. ಬಡವರು ಹಾಗೂ ನಿರ್ಗತಿಕರ ಸಬಲೀಕರಣಕ್ಕಾಗಿ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಅವರ ನಾಯಕತ್ವದಲ್ಲಿ ರಾಷ್ಟ್ರಕ್ಕೆ ಅಪಾರ ಪ್ರಯೋಜನವಾಗಿದೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾವಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರ ಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಶುಭಕೋರಿದ್ದಾರೆ.