ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು…

51
firstsuddi

ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿಯ ಅನಾರೋಗ್ಯ ಹಿನ್ನೆಲೆ ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ.

ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರಿದ್ದ ಕಾರು ಮೈಸೂರಿನ ಕಡಕೊಳ ಬಳಿ ನಿನ್ನೆ ಅಪಘಾತಕ್ಕೀಡಾಗಿತ್ತು. ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ.

ಈ ಹಿಂದೆ 2016ರಲ್ಲಿ ಒಮ್ಮೆ ಹೀರಾಬೆನ್ ಅವರ ಆರೋಗ್ಯ ಹದಗೆಟ್ಟಿತ್ತು. ಬಳಿಕ ಗಾಂಧಿನಗರದ ಸಿವಿಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.