ಇಸ್ಲಾಮಾಬಾದ್ : ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕೊಂಡಿದ್ದ ಪಾಕ್ ನ ಯುವತಿ ಭಾರತೀಯ ರಾಯಭಾರ ಕಚೇರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಉಕ್ರೇನ್ ರಾಜಧಾನಿ ಕೀವ್ ನಿಂದ ಪಾಕ್ ನ ಅಸ್ಮಾ ಶಫೀಕ್ ಅವರನ್ನ ಭಾರತೀಯ ರಾಯಭಾರ ಕಚೇರಿ ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ. ಈ ಹಿನ್ನಲೆಯಲ್ಲಿ ವೀಡಿಯೋ ಮೂಲಕ ಪ್ರಧಾನಿ ಮೋದಿ ಹಾಗೂ ರಾಯಭಾರ ಕಚೇರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ. ಉಕ್ರೇನ್ ನಲ್ಲಿ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದ ನನ್ನನ್ನು ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ನಾವು ಸುರಕ್ಷಿತವಾಗಿ ಮನೆಗೆ ತಲುಪುತ್ತೇವೆ ಎಂದು ಭಾವಿಸುತ್ತೇವೆ ಎಂದು ತಿಳಿಸಿದ್ದಾರೆ.










