ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ಹಿನ್ನೆಲೆ – ನಾಳೆ ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ…

156
firstsuddi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಾಜಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ನಾಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನಗರದ ಈದ್ಗಾ ಮೈದಾನದಲ್ಲಿ ನಾಳೆ ಮಧ್ಯಾಹ್ನ 2ಗಂಟೆಯಿಂದ ಸಂಜೆ 6ಗಂಟೆವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮುಖಂಡರು, ಧಾರ್ಮಿಕ ಮುಖಂಡರು ಸೇರಿದಂತೆ ಒಟ್ಟು 25ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.