ನವದೆಹಲಿ : ಪೆಟ್ರೋಲಿಯಂ ಮಾಜಿ ಕಾರ್ಯದರ್ಶಿ ತರುಣ್ ಕಪೂರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರನ್ನಾಗಿ ನೇಮಿಸಲಾಗಿದೆ.
ಸಂಪುಟ ನೇಮಕಾತಿ ಸಮಿತಿಯು ತರುಣ್ ಕಪೂರ್ ಅವರನ್ನು ಪ್ರಧಾನ ಮಂತ್ರಿಗಳ ಸಲಹೆಗಾರರಾಗಿ, ಪ್ರಧಾನ ಮಂತ್ರಿ ಕಚೇರಿಯಲ್ಲಿ, ಭಾರತ ಸರ್ಕಾರದ ಕಾರ್ಯದರ್ಶಿಯ ಶ್ರೇಣಿಯಲ್ಲಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲು ಅನುಮೋದಿಸಿದೆ ಎಂದು ಸಿಬ್ಬಂದಿ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.
ಹಿಮಾಚಲ ಪ್ರದೇಶ ಕೇಡರ್ ನ 1987-ಬ್ಯಾಚ್ ನ ಐಎಎಸ್ ಅಧಿಕಾರಿ ತರುಣ್ ಕಪೂರ್ ಅವರು ನವೆಂಬರ್ 30, 2021 ರಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಇನ್ನೂ ಹಿರಿಯ ಅಧಿಕಾರಿಗಳಾದ ಹರಿರಂಜನ್ ರಾವ್ ಮತ್ತು ಅತಿಶ್ ಚಂದ್ರ ಅವರನ್ನು ಪ್ರಧಾನಿ ಕಚೇರಿಯಲ್ಲಿ ಹೆಚ್ಚುವರಿ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ.










