ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯಲ್ಲಿ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ 12 ಜನರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ 27 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗೀತ ತಂಡವೊಂದರ ಸದಸ್ಯರನ್ನು ಕರೆದೊಯ್ಯುತ್ತಿದ್ದ ಬಸ್ ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಮುಂಜಾನೆ 4.50ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಖೋಪೋಲಿ ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಗೋರೆಗಾಂವ್ ನಿಂದ ಬಾಜಿ ಪ್ರಭು ವಾಡಕ್ ಸಂಗೀತ ತಂಡದ ಸದಸ್ಯರು ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ದಲ್ಲಿ ಕಾರ್ಯಕ್ರಮ ಮುಗಿಸಿ ಗೋರೆಗಾಂವ್ ಗೆ ಹಿಂತಿರುಗುತ್ತಿದ್ದರು. ಬಸ್ ಇಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸ್ಥಳದಿಂದ ಬಿಟ್ಟಿದೆ. ಗಾಯಗೊಂಡವರು ಮತ್ತು ಮೃತಪಟ್ಟವರು ಮುಂಬೈನ ಸಿಯಾನ್ ಮತ್ತು ಗೋರೆಗಾಂವ್, ನೆರೆಯ ಪಾಲ್ಘರ್ ಜಿಲ್ಲೆಯ ವಿರಾರ್‌ಗೆ ಸೇರಿದವರು ಎಂದು ರಾಯಗಢ ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ಸೋಮನಾಥ್ ಘರ್ಗೆ ತಿಳಿಸಿದ್ದಾರೆ.










