ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾಗಿ ಐವರು ನ್ಯಾಯಾಂಗ ಅಧಿಕಾರಿಗಳು ನಿನ್ನೆ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಬೋಧಿಸಿದರು.
ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾಗಿ ನ್ಯಾ.ಅನಿಲ್ ಭೀಮಸೇನ ಕಟ್ಟಿ, ನ್ಯಾ. ಗುರುಸಿದ್ದಯ್ಯ ಬಸವರಾಜ, ನ್ಯಾ. ಚಂದ್ರಶೇಖರ ಮೃತ್ಯುಂಜಯ ಜೋಶಿ, ನ್ಯಾ. ಉಮೇಶ್ ಮಂಜುನಾಥ್ ಭಟ್ ಅಡಿಗ ಮತ್ತು ನ್ಯಾ.ತಲಕಾಡ್ ಗಿರಿಗೌಡ ಶಿವಶಂಕರೇಗೌಡ ಅವರು ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ವಿ.ಸುನಿಲ್ ಕುಮಾರ್, ಡಾ.ಕೆ.ಸುಧಾಕರ್, ಬಿ.ಸಿ.ನಾಗೇಶ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಆರ್.ವಿಶ್ವನಾಥ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಕರ್ನಾಟಕ ಹೈಕೋರ್ಟ್ ನ ಹಂಗಾಮಿ ನ್ಯಾಯಾಧೀಶರಾದ ಅಲೋಕ್ ಆರಾಧೆ, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.










