ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇನೆ : ಶಾಸಕ ರಘುಪತಿ ಭಟ್.

74
firstsuddi

ಉಡುಪಿ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಗೆ ಬಂದರೆ ಸ್ವಾಗತ ಅವರಿಂದ ಪಕ್ಷ ಮತ್ತಷ್ಟು ಗಟ್ಟಿಯಾಗುತ್ತದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಅವರು ಹೇಳಿದ್ದಾರೆ.

ಪ್ರಮೋದ್ ಅವರು ಬಿಜೆಪಿ ಸೇರ್ಪಡೆಯಾಗುವ ವಿಚಾರವಾಗಿ ಮಾಧ್ಯಮಗಳೊಂದಿಗೆ ಅವರು, ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾಗುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೆ ಪಕ್ಷಕ್ಕೆ ತೆಗೆದುಕೊಳ್ಳುವುದಿದ್ದರೆ ನಮ್ಮಲ್ಲಿ ಕೇಳಿ ತಗೋಳ್ಳುವುದಿಲ್ಲ. ಒಂದು ವೇಳೆ ಬಿಜೆಪಿ ಸೇರ್ಪಡೆ ಆದರೆ ಸ್ವಾಗತ ಮಾಡುತ್ತೇನೆ ಎಂದರು.

ಆಗ ಚುನಾವಣಾ ಸಂದರ್ಭದಲ್ಲಿ ವಿರೋಧ ಮಾಡಿದ್ದೇನೆ, ಕಾರಣ ಆಗ ನಾನು ಟಿಕೇಟ್ ಆಕಾಂಕ್ಷಿಯಾಗಿದ್ದೆ, ಆದ್ದರಿಂದ ಸ್ವಾಭಾವಿಕವಾಗಿ ವಿರೋಧ ಮಾಡಿದ್ದೆ. ಅವರಿಗೆ ಪಕ್ಷದ ಗೇಟ್ ಓಪನ್ ಇದ್ದು, ಅವರು ಬರಬಹುದು. ಈಗ ನಮ್ಮ ಬುಡ ಗಟ್ಟಿ ಇದ್ದು ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅವರು ಹೇಳಿದ್ದಾರೆ.