‘ಪ್ರಳಯ್’ ಖಂಡಾಂತರ ಕ್ಷಿಪಣಿಯ ಮೊದಲ ಪರೀಕ್ಷೆ ಯಶಸ್ವಿ…

60
firstsuddi

ಬಾಲಾಸೋರೆ(ಒಡಿಶಾ) : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ) ತಯಾರಿಸಿದ ಖಂಡಾಂತರ ‘ಪ್ರಳಯ್’ ಕ್ಷಿಪಣಿಯನ್ನು ಒಡಿಶಾದ ಬಾಲೇಶ್ವರದಲ್ಲಿರುವ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಇಂದು ಬೆಳಗ್ಗೆ 10:30ರ ವೇಳೆಗೆ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಈ ಮೂಲಕ ಭಾರತೀಯ ರಕ್ಷಣಾ ಕ್ಷೇತ್ರ ಮತ್ತಷ್ಟು ಬಲಗೊಂಡಿದೆ.

ಘನ ಮತ್ತು ಇಂಧನ ರೂಪದ 500 ರಿಂದ 1,000 ಕೆ.ಜಿ. ಸಿಡಿತಲೆಗಳನ್ನು ಹೊತ್ತು ಸಾಗಬಲ್ಲ ಸಾಮರ್ಥ್ಯ ಇರುವ ಈ ಕ್ಷಿಪಣಿ, 350- 500 ಕಿಮೀ ಕಿಮೀ ದೂರದಲ್ಲಿರುವ ಗುರಿಯನ್ನು ನಾಶ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇಂದು ನಡೆಸಿದ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ಮುಗಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಳಯ್ ಯಶಸ್ವಿ ಹಾರಾಟದ ಪ್ರಯೋಗಕ್ಕಾಗಿ ಡಿಆರ್​ಡಿಒ ಮತ್ತು ಸಂಬಂಧಿತ ತಂಡಗಳನ್ನು ಅಭಿನಂದಿಸಿದ್ದಾರೆ. ಪ್ರಳಯ್ ಆಧುನಿಕ ತಂತ್ರಜ್ಞಾನಗಳನ್ನು ಹೊಂದಿರುವ ಹೊಸ ತಲೆಮಾರಿನ ನೆಲದಿಂದ ನೆಲಕ್ಕೆ ಚಿಮ್ಮುವ ಕ್ಷಿಪಣಿಯಾಗಿದ್ದು, ಶಸ್ತ್ರಾಸ್ತ್ರ ವ್ಯವಸ್ಥೆಯ ಇಂಡಕ್ಷನ್ ಸಶಸ್ತ್ರ ಪಡೆಗಳಿಗೆ ಅಗತ್ಯವಾದ ಸಹಾಯವನ್ನು ನೀಡುತ್ತದೆ ಎಂದು ಹೇಳಿದರು.