ಪ್ರವಾಹ ಸಂತ್ರಸ್ತರಿಗೆ ಆಸರೆಯ ಭರವಸೆ ನೀಡಿದ ಸಿಎಂ ಬಿ.ಎಸ್.ಯಡಿಯೂರಪ್ಪ…

220
firstsuddi

ಬೆಳಗಾವಿ : ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಳೆಯಿಂದ ಉಂಟಾಗಿರುವ ಪ್ರವಾಹದಿಂದಾಗಿ ಭಾರಿ ಪ್ರಮಾಣದ ನಷ್ಟ ಉಂಟಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿರುವ ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವನ್ನು ನೀಡಲಾಗುತ್ತದೆ. ಮನೆ ಕಳೆದುಕೊಂಡವರಿಗೆ ಕೇಂದ್ರದ ಎನ್‍ಡಿಆರ್‍ಎಫ್ ಹಾಗೂ ರಾಜ್ಯ ಸರ್ಕಾರದ ಎಸ್‍ಡಿಆರ್‍ಎಫ್ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಡಲಾಗುವುದು. ಪ್ರವಾಹದಲ್ಲಿ ಸಿಲುಕಿ ಮೃತಪಟ್ಟವರ ಕುಟುಂಬಕ್ಕೆ 5ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದೇವೆ. ನನ್ನ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಿ ಇನ್ನು ನಾಲ್ಕು ದಿನ ನಾನು ಬೆಳಗಾವಿಯಲ್ಲಿ ವಾಸ್ತವ್ಯ ಮಾಡಿ ಎಲ್ಲೆಲ್ಲಿ ಪ್ರವಾಹದಿಂದ ಹಾನಿಯಾಗಿದೆಯೋ ಅಲ್ಲಿಗೆ ಭೇಟಿ ಮಾಡಿ ಸಂತ್ರಸ್ತರ ನೆರವಿಗೆ ನಿಲ್ಲುತ್ತೇನೆ. ಸರ್ಕಾರವೇ ನಿಮ್ಮೊಂದಿಗೆ ಇರುವಾಗ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.