ಬೆಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದು, ಪೊಲೀಸ್ ಮಹಾನಿರ್ದೇಶಕರ ಜೊತೆ ಚರ್ಚಿಸಿದ್ದೇನೆ. ಈ ಪ್ರಕರಣವು ಅಂತಾರಾಜ್ಯ ವಿಚಾರವಾಗಿದೆ. ಇದರ ಸಂಪೂರ್ಣವಾದ ಮಾಹಿತಿಯನ್ನೂ ಸಂಗ್ರಹಿಸಲು ಹೇಳಿದ್ದೇನೆ. ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣದ ತನಿಖೆ, ತ್ವರಿತಗತಿಯಾಗಿ ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎಗೆ ಪತ್ರ ಬರೆಯುಲು ತಿಳಿಸಿದ್ದೇನೆ. ಪ್ರಕರಣವನ್ನ ಎನ್ ಐಎಗೆ ವಹಿಸಲು ತೀರ್ಮಾನಿಸಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.










