ಪ್ರವೀಣ್ ಪಾರ್ಥಿವ ಶರೀರ ಮೆರವಣಿಗೆ ವೇಳೆ ಲಾಠಿಚಾರ್ಚ್ : ಪೊಲೀಸ್ ಅಧಿಕಾರಿಗಳ ಎತ್ತಂಗಡಿ…

88
firstsuddi

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರಿಗೆ ಲಾಠಿ ಚಾರ್ಚ್ ಮಾಡಿದ ಪರಿಣಾಮ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಲಾಠಿಚಾರ್ಜ್ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರು ಆಗ್ರಹಿಸಿದ ಹಿನ್ನೆಲೆ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಠಾಣೆಯ ಪಿಎಸ್ಐ ಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.

ವಿಟ್ಲ ಠಾಣೆಯ ಪಿಎಸ್ ಐ ಮಂಜುನಾಥ್ ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ ಐ ಸುಹಾನ್ ಆರ್. ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.