ಪ್ರವೀಣ್ ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು…

60
firstsuddi

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಝಾಕೀರ್ ಮತ್ತು ಶಫೀಕ್ ಬಂಧಿತ ಆರೋಪಿಗಳು. ಝಾಕೀರ್ ಪುತ್ತೂರು ತಾಲೂಕಿನ ಸವಣೂರು ನಿವಾಸಿಯಾಗಿದ್ದು, ಶಫೀಕ್ ಬೆಳ್ಳಾರೆ ನಿವಾಸಿಯಾಗಿದ್ದಾನೆ. ಝಾಕೀರ್ ಸವಣೂರು ಎಸ್ ಡಿಪಿಐ ಗ್ರಾಮ ಸಮಿತಿ ಮುಖಂಡನಾಗಿದ್ದು, ಶಫೀಕ್ ಎಸ್ ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ. 

ಈ ಇಬ್ಬರ ಸಂಘಟನೆ ಹಿನ್ನೆಲೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆಗೆ ಸ್ಪಷ್ಟ ಕಾರಣದ ಬಗ್ಗೆ, ಇನ್ನೂ ಯಾರಾದರೂ ಇದ್ದಾರಾ ಎಂಬ ಬಗ್ಗೆ ಕೂಲಂಕಶವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಎಸ್ ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ಇದೇ ವೇಳೆ ಮಾತನಾಡಿದ ಕಾನೂನು ಸುವ್ಯಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಈಗಾಗಲೇ ಸುಮಾರು 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಅವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದರು.