ಮುಂಬೈ : ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಪ್ರೇರೇಪಿಸಿದ ಆರೋಪದ ಮೇಲೆ ಪ್ರಸಿದ್ಧ ಯೂಟ್ಯೂಬರ್ ‘ಹಿಂದೂಸ್ಥಾನಿ ಭಾವು ಯಾನೆ ವಿಕಾಸ್ ಪಾಠಕ್’ ಸೇರಿದಂತೆ ಇಬ್ಬರನ್ನು ಧಾರಾವಿ ಪೊಲೀಸರು ಇಂದು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸರು ಇಕ್ರಾರ್ ಖಾನ್ ವಖಾರ್ ಖಾನ್ ಎಂಬಾತನನ್ನೂ ಬಂಧಿಸಿದ್ದಾರೆ. 10 ಮತ್ತು 12ನೇ ತರಗತಿಗಳಿಗೆ ಆನ್‌ಲೈನ್ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಮಹಾರಾಷ್ಟ್ರ ಶಿಕ್ಷಣ ಸಚಿವ ವರ್ಷಾ ಗಾಯಕ್ ವಾಡ್ ಅವರ ನಿವಾಸದ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ವೀಡಿಯೋವನ್ನು ಹಿಂದೂಸ್ತಾನಿ ಭಾವು ತನ್ನ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದರು. ಇದರಿಂದ ಅವರು ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ.










