ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹೆಸರನ್ನು `ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರುನಾಮಕರಣ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಅನೇಕ ರಾಜ್ಯಗಳಲ್ಲಿ `ಶಾಲಾ ಶಿಕ್ಷಣ’ ಎಂದೇ ಕರೆಯಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ `ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರುನಾಮಕರಣ ಮಾಡಿದೆ.
ಈ ಕುರಿತಂತೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. “ರಾಷ್ಟ್ರೀಯ ಶಿಕ್ಷಣ ನೀತಿ-2020” ರಲ್ಲಿಯೂ ಸಹ ಈ ಅಂಶವನ್ನು ಪುನರುಚ್ಛರಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಇಲಾಖೆಯ (ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ; ಪದನಾಮವನ್ನು ಶಾಲಾ ಶಿಕ್ಷಣ ಇಲಾಖೆ ಎ೦ದು ಬದಲಾಯಿಸುವುದು ಸೂಕ್ತ ಎ೦ದು ವಿವಿಧ ಹಂತದ ಚರ್ಚೆಯಲ್ಲಿ ತಜ್ಜರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.










