ಪ್ರಿಯತಮ ಕರೆ ಸ್ವೀಕರಿಸಿಲ್ಲ ಎಂದು ಮನನೊಂದು ಯುವತಿ ಆತ್ಮಹತ್ಯೆ-ವಿಷಯ ತಿಳಿದು ನೇಣಿಗೆ ಕೊರಳೊಡ್ಡಿದ ಪ್ರಿಯತಮ…

474
firstsuddi

ಹುಬ್ಬಳ್ಳಿ : ಪ್ರಿಯತಮ ಕರೆ ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ಇತ್ತ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರ್ಕಿ ಬಸವೇಶ್ವರ ನಗರದಲ್ಲಿ ನಡೆದಿದೆ. ರೇಖಾ(19) ಹಾಗೂ ವಿಷ್ಣು ಪಗಲಾಪುರ(20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಎಂದು ಗುರುತಿಸಲಾಗಿದ್ದು, ರೇಖಾ ಹಾಗೂ ವಿಷ್ಣು ಕಳೆದ ಐದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಮನೆಯವರ ವಿರೋಧದ ನಡುವೆಯೇ ಇಬ್ಬರ ಮನೆಯವರು ಕಳೆದ 5ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿದ್ದರು. ಏಪ್ರಿಲ್ 24ರಂದು ಮದುವೆ ಕೂಡಾ ನಿಶ್ಚಯವಾಗಿತ್ತು. ರೇಖಾ ಅವರು ನಿನ್ನೆ ದಿನವಿಡೀ ವಿಷ್ಣು ಅವರಿಗೆ ಕರೆ ಮಾಡಿದ್ದಾರೆ. ಆದರೆ ವಿಷ್ಣು ಕರೆ ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಅಜ್ಜಿ ಮನೆಗೆ ತೆರಳಿದ ವಿಷ್ಣು ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.