ಶಿವಮೊಗ್ಗ : ನೆರೆಮನೆ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ನಡೆದಿದೆ.
ವಿದ್ಯಾಶ್ರೀ(21) ಮೃತ ಯುವತಿ. ವಿದ್ಯಾಶ್ರೀ ಹೊಸನಗರದ ಕೊಡಚಾದ್ರಿ ಪದವಿ ಕಾಲೇಜಿನಲ್ಲಿ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ವಿದ್ಯಾಶ್ರೀ ಪ್ರತಿ ನಿತ್ಯ ಕಾಲೇಜಿಗೆ ತೆರಳುವ ವೇಳೆ ಶಶಾಂಕ್ ಎಂಬಾತ ತನ್ನನ್ನು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ.
ಶಶಾಂಕ್ ಕಿರುಕುಳಕ್ಕೆ ಬೇಸತ್ತು ಏಪ್ರಿಲ್ 19ರಂದು ವಿದ್ಯಾಶ್ರೀ ಕ್ರಿಮಿನಾಶಕ ಸೇವಿಸಿದ್ದಳು. ಪೋಷಕರು ಆಕೆಯನ್ನು ಮಣಿಪಾಲಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾಳೆ.
ಈ ಸಾವಿಗೆ ಶಶಾಂಕ್ ಕಾರಣ ಆತನನ್ನು ಬಂಧಿಸಿ ಎಂದು ವಿದ್ಯಾಶ್ರೀ ಸಹೋದರ ರಕ್ಷಿತ್ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










