ನೆಲಮಂಗಲ : ಪ್ರೀತಿ ವಿಷಯದಲ್ಲಿ ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಕೇರಳ ಮೂಲದ ಅನಾಗ ಗೋಪಾ(19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಹೆಸರಘಟ್ಟದ ಆಚಾರ್ಯ ಕಾಲೇಜ್ ನಲ್ಲಿ ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ಅನಾಗ ಗೋಪ ಪಿಜಿಯಲ್ಲಿ ವಾಸವಾಗಿದ್ದಳು. ಈಕೆ ಯುವಕನೋರ್ವನ ಜೊತೆ ಸುತ್ತಾಡುತ್ತಿರುವ ವಿಷಯ ಆಕೆಯ ಪೋಷಕರಿಗೆ ತಿಳಿದಿತ್ತು. ಹೀಗಾಗಿ ಮಗಳಿಗೆ ಓದುವ ವಯಸ್ಸಿನಲ್ಲಿ ಪ್ರೀತಿ ಮಾಡಬೇಡ ಎಂದು ಬುದ್ಧಿ ಮಾತು ಹೇಳಿದ್ದರು ಎನ್ನಲಾಗುತ್ತಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಪಿಜಿಯ ರೂಂನ ಫ್ಯಾನಿಗೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










