ಪ್ರೇಮಿಗಳ ನಡುವಿನ ಜಗಳ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯ…

92
firstsuddi

ಬೆಂಗಳೂರು : ಪ್ರೇಮಿಗಳ ನಡುವೆ ಆರಂಭವಾದ ಜಗಳ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ರಾಮಮೂರ್ತಿನಗರದ ಟಿ.ಸಿ.ಪಾಳ್ಯದಲ್ಲಿ ನಡೆದಿದೆ.

ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿ. ನೇಪಾಳ ಮೂಲದ ಸಂತೋಷ್ ದಾಮಿ (27) ಕೊಲೆ ಮಾಡಿದ ಆರೋಪಿ. ಕೊಲೆಯಾದ ಕೃಷ್ಣಕುಮಾರಿ ಹೊರಮಾವು ಬಳಿ ಸ್ಪಾ ಒಂದರಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಳು. ಆರೋಪಿ ಸಂತೋಷ್ ದಾಮಿ ಟಿ.ಸಿ.ಪಾಳ್ಯದಲ್ಲಿ ಬಾರ್ಬರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದನು.

ಇಬ್ಬರಿಗೂ ಪರಿಚಯವಾಗಿ ಪ್ರೇಮಾಂಕುರವಾಗಿತ್ತು. ಅದಾದ ಬಳಿಕ ಕೃಷ್ಣಕುಮಾರಿ ಹಾಗೂ ಸಂತೋಷ್ ಇಬ್ಬರು ಸೇರಿ ಮನೆಯೊಂದನ್ನು ಬಾಡಿಗೆ ಪಡೆದು ಲಿವ್ ಇನ್ ರಿಲೇಶನ್‌ಶಿಪ್‍ನಲ್ಲಿದ್ದರು. ಇಂದು ಬೆಳಗ್ಗೆ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಜಗಳ ತಾರಕ್ಕೇರಿದ್ದು ಸಂತೋಷ್ ಪ್ರೇಯಸಿ ಕೃಷ್ಣಕುಮಾರಿ ತಲೆಯನ್ನು ಗೋಡೆಗೆ ಗುದ್ದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಕೃಷ್ಣಕುಮಾರಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು ಸಂತೋಷ್ ನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.