ಪ್ರೇಮ ವೈಫಲ್ಯ – ಆತ್ಮಹತ್ಯೆಗೆ ಶರಣಾದ ಯುವಕ!

87
firstsuddi

ದಾವಣಗೆರೆ : ಪ್ರೇಮ ವೈಫಲ್ಯದಿಂದ ಮನನೊಂದ ಪ್ರೇಮಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ನಗರದ ಎಚ್ ಕೆಆರ್ ವೃತ್ತದ ಲೆನಿನ್ ನಗರದ ಹೊಸ ಬಡಾವಣೆ ನಿವಾಸಿ ಮಹಾಂತೇಶ್ (24) ಆತ್ಮಹತ್ಯೆ ಶರಣಾದ ಯುವಕ.

ಕರೂರು ಕೈಗಾರಿಕಾ ಪ್ರದೇಶದಲ್ಲಿನ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ್,. ಇದೇ ಗಾರ್ಮೆಂಟ್ಸ್ ನಲ್ಲಿನ ಯುವತಿಯೊಬ್ಬಳ ಪರಿಚಯವಾಗಿ, ಬಳಿಕ ಪ್ರೇಮಕ್ಕೆ ತಿರುಗಿದೆ. ಆದರೆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ ಎನ್ನಲಾಗಿದೆ. ಇದರಿಂದ ಮನನೊಂದ ಯುವಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನೂ ಆತ್ಮಹತ್ಯೆಗೂ ಮುನ್ನ ‘ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿಯೇ ಕಾರಣ’, ಎಂದು ವಾಟ್ಸಪ್ ನಲ್ಲಿ ಸ್ಟೇಟಸ್ ಗೆ ಹಾಕಿ, ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.