ಪ್ರೇಯಸಿ ಮನೆಯವರ ಕಿರುಕುಳದಿಂದ ಮನನೊಂದು ಯುವಕ ಆತ್ಮಹತ್ಯೆ…

45
firstsuddi

ಶಿವಮೊಗ್ಗ : ಪ್ರೇಯಸಿ ಮನೆಯವರ ಕಿರುಕುಳದಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ನಡೆದಿದೆ. ಮದನ್ ಕುಮಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.

ಡೆತ್ ನೋಟ್ ಬರೆದಿಟ್ಟು ಕಳೆದ ನಾಲ್ಕು ದಿನಗಳ ಹಿಂದೆಯೇ ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಮೃತ ಮದನ್ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಹಲವು ವರ್ಷಗಳಿಂದ ಇಬ್ಬರ ನಡುವೆ ಪ್ರೀತಿಯಿತ್ತು. ಆದರೆ ಯುವತಿ ಮನೆಯವರು ಮದನ್ ವಿರುದ್ಧ ಅತ್ಯಾಚಾರ ಹಾಗೂ ಕಿರುಕುಳ ನೀಡುತ್ತಿದ್ದ ಆರೋಪ ಹೊರಿಸಿ, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣವೂ ದಾಖಲಾಗಿತ್ತು. ಇದೇ ಕಾರಣಕ್ಕೆ ನೊಂದು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೂ ಮುನ್ನ ಯುವಕ ತನ್ನ ಅಂಗಾಂಗ ದಾನ ಮಾಡುವಂತೆ ಡೆತ್ ನೋಟ್ ಬರೆದಿಟ್ಟಿದ್ದಾನೆ. ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ.