ಫುಲ್ ರಶ್ ಆಗಿದ್ದ ಸಾರಿಗೆ ಬಸ್‍ನಿಂದ ಬಿದ್ದು ಬಾಲಕಿ ಸಾವು…

49
firstsuddi

ಹಾವೇರಿ: ಫುಲ್ ರಶ್ ಆಗಿದ್ದ ಸಾರಿಗೆ ಬಸ್‍ನಿಂದ ಬಿದ್ದು 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್‌ನಲ್ಲಿ ಜನ ತುಂಬಿದ್ದಾರೆಂದು ಬಸ್ ಬಾಗಿಲ ಬಳಿ ವಿದ್ಯಾರ್ಥಿನಿ ನಿಂತಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ವಿದ್ಯಾರ್ಥಿನಿ ಮೇಲೆ ಹೆಚ್ಚಿನ ಜನರು ಭಾರ ಹಾಕಿದ್ದರಿಂದ ಬಾಲಕಿ ಕೆಳಗಡೆ ಬಿದ್ದಿದ್ದಾಳೆ. ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಬಾಲಕಿ ವಾಸನ ಗ್ರಾಮದಿಂದ ಕುಸನೂರು ಗ್ರಾಮದ ಶಾಲೆಗೆ ಬಸ್‍ನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಪ್ರೌಢ ಶಾಲೆಗೆ ದಾಖಲಾಗಿದ್ದಳು. ಕುಟುಂಬದಲ್ಲಿ ಒಬ್ಬಳೇ ಮಗಳಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.