ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ : ಸಚಿವ ಮಾಧುಸ್ವಾಮಿ.

47
firstsuddi

ಬೆಂಗಳೂರು : ಫೆಬ್ರವರಿ 17 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಮಾಡಲಾಯಿತು.

ಕ್ಯಾಬಿನೆಟ್ ಬಳಿಕ ಸುದ್ದಿಗೋಷ್ಟಿ ನಡೆಸಿದ ಸಚಿವ ಮಾಧುಸ್ವಾಮಿ ಅಧಿವೇಶನದ ಬಗ್ಗೆ ಮಾಹಿತಿ ನೀಡಿದರು. ಫೆಬ್ರವರಿ 10 ರಂದು ಜಂಟಿ ಅಧಿವೇಶನ ಪ್ರಾರಂಭವಾಗಲಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 17 ರಂದು ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಚುನಾವಣೆ ವರ್ಷ ಅಗಿರುವುದರಿಂದ ಈ ಬಾರಿ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನವನ್ನ ಏಕಕಾಲದಲ್ಲಿ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಹೇಳಿದರು.