ಫೆ.10ಕ್ಕೆ ತಾಲೂಕು ಮಟ್ಟದ ತೃತೀಯ ಜಾನಪದ ಸಮ್ಮೇಳನ: ಆಹ್ವಾನ ಪತ್ರಿಕೆ ಬಿಡುಗಡೆ…

61
firstsuddi

ಚಿಕ್ಕಮಗಳೂರು:- ಕರ್ನಾಟಕ ಜಾನಪದ ಪರಿಷತ್ತಿನಿಂದ ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿ ಫೆ 10 ರಂದು ನಡೆಯಲಿರುವ ತಾಲೂಕು ಮಟ್ಟದ ತೃತೀಯ ಜಾನಪದ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ನಿನ್ನೆ ಬಿಡುಗಡೆಗೊಳಿಸಲಾಯಿತು.

ಗಡಿಹಳ್ಳಿಯ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿಎಸ್ ತಿಮ್ಮಯ್ಯ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಅವರು ಆಧುನಿಕತೆಯ ಅಬ್ಬರದಲ್ಲಿ ಮರೆಯಾಗುತ್ತಿರುವ ಜಾನಪದವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಯೋಜಿಸಿರುವ ಜಾನಪದ ಸಮ್ಮೇಳನದ ಯಶಸ್ಸಿಗೆ ಗ್ರಾಮದ ಪ್ರತಿಯೊಬ್ಬರೂ ದುಡಿಯಬೇಕು ಎಂದು ಸಲಹೆ ಮಾಡಿದರು.
ಜಾನಪದ ಸಮ್ಮೇಳನವನ್ನು ಗ್ರಾಮದಲ್ಲಿ ಹಬ್ಬದಂತೆ ಆಚರಿಸಬೇಕು ಸಮ್ಮೇಳನಕ್ಕೆ ಮುನ್ನ ಗ್ರಾಮವನ್ನು ಅಲಂಕರಿಸಬೇಕು ಎಂದು ಹೇಳಿದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ ಬಿ ಮಾತನಾಡಿ, ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮನೆ ಮನೆಗಳಲ್ಲೂ ಬೆಳೆಸುವ ನಿಟ್ಟಿನಲ್ಲಿ ಜಾನಪದ ಸಮ್ಮೇಳನವನ್ನು ನಡೆಸಲಾಗುತ್ತಿದ್ದು ಅದರ ಯಶಸ್ಸಿಗೆ ಇಡೀ ಗ್ರಾಮ ಒಂದಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಗ್ರಾಮಾಭಿವೃದ್ಧಿ ಸಮಿತಿ ಸದಸ್ಯ ಜಿ ಎಲ್ ಮಂಜುನಾಥ್ ಮಾತನಾಡಿ ಸಮ್ಮೇಳನಕ್ಕೆ ಮುನ್ನ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ವಿವಿಧ ಕಲಾತಂಡಗಳ ನಡುವೆ ಗ್ರಾಮದಲ್ಲಿ ಅದ್ದೂರಿಯಾಗಿ ನಡೆಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಸದಸ್ಯೆ ಮುಗುಳಿ ಲಕ್ಷ್ಮಿದೇವಮ್ಮ ಕರ್ನಾಟಕ ಜಾನಪದ ಪರಿಷತ್ತಿನ ಅಜ್ಜಂಪುರ ತಾಲೂಕು ಅಧ್ಯಕ್ಷ ಹಿರಿಯ ವೀರಗಾಸೆ ಕಲಾವಿದ ಡಾ ಮಾಳೇನಹಳ್ಳಿ ಬಸಪ್ಪ ಗೌರವಾಧ್ಯಕ್ಷ ಮರುಳ ಸಿದ್ದಪ್ಪ ಜಿಲ್ಲಾ ಉಪಾಧ್ಯಕ್ಷ ಜಿ ತಿಪ್ಪೇಶ್ ಪರಮೇಶ್ವರಪ್ಪ ಚಿಕ್ಕನಲ್ಲೂರು ಜಯಣ್ಣ ಅಣ್ಣಯ್ಯ ಗೋವಿಂದಪ್ಪ ಮಲಿಯಪ್ಪ ನಂದೀಶ್ ಉಪಸ್ಥಿತರಿದ್ದರು.