ಜೇಮ್ಸ್​ ಸಿನಿಮಾದ ಟೀಸರ್​ ಬಿಡುಗಡೆಗೆ ದಿನಾಂಕ ನಿಗದಿ…

87
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಪುನೀತ್ ರಾಜ್​ಕುಮಾರ್ ಅಭಿನಯದ ಜೇಮ್ಸ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಈ ಕುರಿತು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಫೆಬ್ರವರಿ 11 ರಂದು ಬೆಳಿಗ್ಗೆ 11.11 ಕ್ಕೆ ಜೇಮ್ಸ್ ಅಧಿಕೃತ ಟೀಸರ್ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡಿದ್ದಾರೆ.

ಈ ಚಿತ್ರಕ್ಕೆ ನಿರ್ದೇಶಕ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದು, ಅಪ್ಪು ಹುಟ್ಟುಹಬ್ಬದ ದಿನದಂದೇ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಲಾಗುತ್ತಿದೆ. ಇತ್ತೀಚೆಗಷ್ಟೇ ಚಿತ್ರತಂಡ ಜೇಮ್ಸ್ ಸಿನಿಮಾದ ಪೋಸ್ಟರ್ ರಿವೀಲ್ ಮಾಡಿತ್ತು. ಕೆಲ ದಿನಗಳ ಹಿಂದೆ ಶಿವರಾಜ್​ಕುಮಾರ್ ಹಾಗೂ ರಾಘವೇಂದ್ರ ರಾಜ್​ಕುಮಾರ್ ಅವರು ಈ ಚಿತ್ರದಲ್ಲಿ ನಟಿಸಿದ್ದು, ಡಬ್ಬಿಂಗ್ ಕೂಡ ಮುಗಿಸಿದ್ದಾರೆ. ಪುನೀತ್ ಕೊನೆದಾಗಿ ಅಭಿನಯಿಸಿರುವ ಸಿನಿಮಾ ಜೇಮ್ಸ್ ಆಗಿದ್ದು, ಈ ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.