ಫೆ.27ಕ್ಕೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ ಮೋದಿ.

83
firstsuddi

ಬೆಳಗಾವಿ : ಫೆಬ್ರವರಿ 27ರಂದು ಕುಂದಾನಗರಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಬೆಳಗಾವಿಗೆ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ರಾಜ್ಯ ಉಪಾಧ್ಯಕ್ಷ ನಿರ್ಮಲಕುಮಾರ್ ಸುರಾನ ಅವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಶಾಸಕರಾದ ಅಭಯ ಪಾಟೀಲ್, ಅನಿಲ್ ಬೆನಕೆ ಸೇರಿ ಅನೇಕ ಪ್ರಮುಖರು ಭಾಗಿಯಾಗಿದ್ದರು.

ಫೆ.27ರಂದು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ನಂತರ ಮಧ್ಯಾಹ್ನ 2.15ಕ್ಕೆ ಬೆಳಗಾವಿಗೆ ಆಗಮಿಸಿ ಬೆಳಗಾವಿ ರೈಲು ನಿಲ್ದಾಣ ಉದ್ಘಾಟಿಸಲಿದ್ದಾರೆ. ರೈತ ಸನ್ಮಾನ ನಿಧಿಯ ಎರಡನೇ ಕಂತಿನ ಹಣ ಬಿಡುಗಡೆಗೂ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 2.15ರಿಂದ 3.30ರವರೆಗೆ ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ. ಸಾವಗಾವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನ ಭದ್ರತಾ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ ಬಳಿಕ ಸಮಾವೇಶದ ಸ್ಥಳ ನಿಗದಿ ಆಗಲಿದೆ. ಬೆಳಗಾವಿಯಲ್ಲಿ 18 ಕ್ಷೇತ್ರಗಳಿಂದ 2 ಲಕ್ಷಕ್ಕೂ ಹೆಚ್ಚು ಜನ ಸೇರಿಸಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಈಗಿನಿಂದಲೇ ತಯಾರಿ ಮಾಡಿಕೊಂಡಿದ್ದಾರೆ.