ಫೋಟೋಶೂಟ್​​ಗೆ ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೆ ಮನನೊಂದು ಯುವತಿ ಆತ್ಮಹತ್ಯೆ…

53
firstsuddi

ಬೆಂಗಳೂರು: ಫೋಟೋಶೂಟ್​​ಗೆ ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೆ ಮನನೊಂದು ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುಧಾಮನಗರದಲ್ಲಿ ನಡೆದಿದೆ.

ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದಳು. ವರ್ಷಿಣಿ ನಿನ್ನೆ ಮಾಲ್​ಗೆ ಹೋಗಿ ಫೋಟೋಶೂಟ್ ಮಾಡಿಸಬೇಕು ಎಂದು ರೆಡಿಯಾಗಿದ್ದಳು. ಆದರೆ ಪೋಷಕರು ಮಾಲ್​ಗೆ ಹೋಗಬೇಡ ಎಂದು ಬುದ್ಧಿವಾದ ಹೇಳಿದ್ದಾರೆ. ಇಷ್ಟಕ್ಕೆ ಮನನೊಂದ ವರ್ಷಿಣಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸದ್ಯ ಯುವತಿ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.