ಫೋನ್ ಕದ್ದಾಲಿಕೆ ಪ್ರಕರಣ; ಅಲೋಕ್ ಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿ…

237
firstsuddi

ಬೆಂಗಳೂರು : ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಿಚಾರಣೆಯನ್ನು ಚುರುಕುಗೊಳಿಸಿದ್ದು, ಇಂದು ಬೆಳ್ಳಂಬೆಳಗ್ಗೆ ಎಡಿಜಿಪಿ ಕೆಎಸ್‍ಆರ್‍ಪಿ ಅಲೋಕ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅಲೋಕ್ ಕುಮಾರ್ ಅವರು ಬೆಂಗಳೂರು ಕಮಿಷನರ್ ಆಗಿದ್ದರು. ಈ ವೇಳೆ ಅಲೋಕ್ ಕುಮಾರ್ ಅವರ ನಿವಾಸದಲ್ಲಿ ಫೋನ್ ಕದ್ದಾಲಿಕೆ ಆಗಿದೆ. ಹಾಗೂ ಎಲ್ಲಾ ಮಾಹಿತಿಗಳನ್ನು ಪೆನ್‍ಡ್ರೈವ್‍ನಲ್ಲಿ ಸಂಗ್ರಹಿಸಿ ಇಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿತ್ತು. ಹೀಗಾಗಿ ಫೋನ್ ಕದ್ದಾಲಿಕೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಬಿಐ ಅಧಿಕಾರಿಗಳು ಅಲೋಕ್ ಕುಮಾರ್ ಹಾಗು ಅವರ ಕುಟುಂಬದವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.